ನರ್ವಾಲ್, ಜ 21 (DaijiworldNews/DB): ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಸುಮಾರು 20 ನಿಮಿಷಗಳ ಅಂತರದಲ್ಲಿ ಎರಡು ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ.
ಸಾರಿಗೆ ನಗರದ ವಾರ್ಡ್ ಸಂಖ್ಯೆ 7ರಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಮೊದಲ ಸ್ಪೋಟ ಸಂಭವಿಸಿದೆ. ಇದಾದ ಬಳಿಕ 15ರಿಂದ 20 ನಿಮಿಷ ಕಳೆದ ಕೂಡಲೇ ಇನ್ನೊಂದು ಸ್ಪೋಟ ಅದೇ ಪ್ರದೇಶದಲ್ಲಿ ಸಂಭವಿಸಿದೆ. ಜಿಗುಟಾದ ಬಾಂಬ್ಗಳನ್ನು ಎರಡೂ ಸ್ಪೋಟ ಪ್ರಕರಣಗಳಲ್ಲಿ ಬಳಸಲಾಗಿದೆ ಎಂದು ಎಂದು ಜಮ್ಮು ವಲಯದ ಎಡಿಜಿಪಿ ಮುಖೇಶ್ ಸಿಂಗ್ ತಿಳಿಸಿದ್ದಾರೆ.
ಘಟನೆ ಮಾಹಿತಿ ತಿಳಿದ ಕೂಡಲೇ ಜಮ್ಮು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಎರಡು ವಾಹನಗಳು ಸ್ಪೋಟಗೊಂಡ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ಮೊದಲ ಸ್ಪೋಟ ಸಂಭವಿಸಿದನ್ನು ನೋಡಲು ಬಂದ ಜನರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಎರಡನೇ ಸ್ಪೋಟ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.