ಹಾಸನ, ಜ 21 (DaijiworldNews/HR): ಬಿಜೆಪಿಯವರಿಗೆ ಆಡಿದ ಮಾತಿನ ಮೇಲೆ ನಿಗಾ ಇಲ್ಲ, ಅವರಿಗೆ ನಾಲಿಗೆನೇ ಇಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಹಾಳಾಗಲಿ ಎಂದು ಶಪಿಸಿದರು. ಬಿಜೆಪಿಯವರು ಕಳೆದ ಚುನಾವಣೆಯಲ್ಲಿ 600 ಭರವಸೆಗಳನ್ನು ನೀಡಿದ್ದರು. ಆದರೆ ಅದರಲ್ಲಿ ಈಡೇರಿಸಿದ್ದು, 50 ರಿಂದ 60 ಭರವಸೆಗಳನ್ನಷ್ಟೆ. ಆದರೆ ನಾನು ಮುಖ್ಯಮಂತ್ರಿಯಾಗುವ ಮುನ್ನ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆ ಎಂದರು.
ಇನ್ನು ಪ್ರಜಾಧ್ವನಿ ಯಾತ್ರೆ ಮೂಲಕ ಬಿಜೆಪಿಯವರ ಪಾಪದ ಪುರಾಣವನ್ನು ಬಹಿರಂಗ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಲಂಚ ನಿರ್ಮೂಲನೆ, ಭ್ರಷ್ಟಾಚಾರ ರಹಿತ ಜನಪರ ಆಡಳಿತ ಕೊಡುವ ವಾಗ್ಧಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.