ನವದೆಹಲಿ, ಜ 22 (DaijiworldNews/HR): ಜ. 31ರಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿಯವರು ಜ. 29 ರಂದು ಸಚಿವ ಸಂಪುಟ ಸಭೆಗೆ ಕರೆದಿದ್ದಾರೆ.
ಮೋದಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ಗೂ ಮುನ್ನ ಕರೆದಿರುವ ಸಚಿವ ಸಂಪುಟ ಸಭೆ ನಿರ್ಣಾಯಕ ಎಂದು ಹೇಳಲಾಗುತ್ತಿದ್ದು, ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
ಇನ್ನು 2023 ರಲ್ಲಿ ಮೋದಿಯವರ ಕ್ಯಾಬಿನೆಟ್ ಸಭೆ ಇದಾಗಿದ್ದು, ಇದರಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ) ಮತ್ತು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ.