ಜಮ್ಮು, ಜ 23 (DaijiworldNews/HR): ಎರಡು ಐಇಡಿಗಳನ್ನು ನಿಷ್ಕ್ರಿಯಗೊಳಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಸೇನೆ ಮತ್ತು ಸಿಆರ್ಪಿಎಫ್ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐಇಡಿಗಳು ಪತ್ತೆಯಾಗಿದ್ದು, ಗುಪ್ತಚರ ದಳ ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ಕೈಗೊಂಡಾಗ ಐಇಡಿಗಳು ಪತ್ತೆಯಾಗಿದ್ದವು ಎಂದಿದ್ದಾರೆ.
ಇನ್ನು ಕಾರ್ಯಾಚರಣೆ ವೇಳೆ ವಶಕ್ಕೆ ಪಡೆಯಲಾದ ಐಇಡಿಗಳನ್ನು ಚಿಂಗಸ್ ಅರಣ್ಯ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳದ ತಂಡದಿಂದ ನಿಷ್ಕ್ರಿಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.