ತಿರುವನಂತಪುರಂ, ಜ 23 (DaijiworldNews/HR): ತಿರುವನಂತಪುರಂನಿಂದ ಮಸ್ಕತ್ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ತಾಂತ್ರಿಕ ದೋಷದಿಂದ ಹಿಂತಿರುಗಿದೆ.
ಐಎಕ್ಸ್ 549 ವಿಮಾನವು ಕೇರಳ ರಾಜ್ಯದ ರಾಜಧಾನಿ ತಿರುವನಂತಪುರಂನಿಂದ ಬೆಳಿಗ್ಗೆ 8.30 ಕ್ಕೆ ಟೇಕ್ ಆಫ್ ಆಗಿದ್ದು, ಪೈಲಟ್ ಆನ್ಬೋರ್ಡ್ ಕಂಪ್ಯೂಟರ್ ಸಿಸ್ಟಮ್ನಲ್ಲಿ ತಾಂತ್ರಿಕ ದೋಷ ಗಮನಿಸಿದ ನಂತರ 9.17 ಕ್ಕೆ ವಾಪಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದೆ.
ಇನ್ನು ಎಲ್ಲಾ 105 ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಕ್ತಾರರು ತಿಳಿಸಿರುವುದಾಗಿ ವರದಿಯಾಗಿದೆ.