ಮಡಿಕೇರಿ, ಜ. 24 (DaijiworldNews/SM): ಕೊಡಗು ಜೆಡಿಎಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಜೆಡಿಎಸ್ ಯುವ ಮುಖಂಡ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರು ಸಮಸ್ಯೆ ಬಗೆಹರಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
ಯುವವಾಹಿನಿಯ ಸಭೆಯ ನೇತೃತ್ವ ವಹಿಸಲು ಪ್ರಜ್ವಲ್ ರೇವಣ್ಣ ಅವರು ಮಂಗಳವಾರ ಸೋಮವಾರಪೇಟೆಗೆ ಭೇಟಿ ನೀಡಿದ್ದು, ಈ ವೇಳೆ ಭಿನ್ನಮತ ಶಮನಗೊಳಿಸಲು ಯತ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದ ಗಣೇಶ್, ಜೆಡಿಎಸ್ ಹೈಕಮಾಂಡ್ ಇನ್ನೂ ಉಮೇದುವಾರಿಕೆ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈ ಕಾರಣದಿಂದಾಗಿ ಮುತ್ತಪ್ಪ ಅವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಉಮೇದುವಾರಿಕೆ ‘ಸ್ವಯಂ ಘೋಷಣೆ’ ಪಕ್ಷದೊಳಗೆ ಆಂತರಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ ಎಂದು ಗಣೇಶ್ ಅವರು ತಾವು ನೀಡಿದ ನೋಟಿಸ್ನಲ್ಲಿ ತಿಳಿಸಿದ್ದಾರೆ ಮತ್ತು ಏಳು ದಿನಗಳಲ್ಲಿ ಸ್ಪಷ್ಟನೆ ನೀಡಬೇಕು ಎಂದು ಸೂಚಿಸಿದ್ದಾರೆ.
ಸೋಮವಾರಪೇಟೆಯಲ್ಲಿ ಇಂದು ನಡೆದ ಜೆಡಿಎಸ್ ಯುವ ಘಟಕದ ಸಮಾವೇಶದ ನೇತೃತ್ವ ವಹಿಸಿದ್ದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಜಿಲ್ಲಾಧ್ಯಕ್ಷ ಕೆಎಂಬಿ ಗಣೇಶ್ ವಿರುದ್ಧ ಕಿಡಿ ಕಾರಿದ್ದಾರೆ. ಈ ಸಭೆಗೆ ಗಣೇಶ್ ಹಾಜರಾಗದಿದ್ದರೂ, ಗಣೇಶ್ ಅವರು ಮುತ್ತಪ್ಪ ಅವರಿಗೆ ನೋಟಿಸ್ ನೀಡಿರುವ ರೀತಿಯನ್ನು ಪ್ರಜ್ವಲ್ ಪ್ರಶ್ನಿಸಿದ್ದಾರೆ. ಪಕ್ಷದೊಳಗೇ ಇತ್ಯರ್ಥಪಡಿಸುವ ಬದಲು ಈ ವಿಚಾರವನ್ನು ಸಾರ್ವಜನಿಕಗೊಳಿಸಿದ್ದಕ್ಕೆ ಗಣೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.