ನವದೆಹಲಿ, ಜ 25 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ಬಿಬಿಸಿ ನಿರ್ಮಿಸಿರುವ 'ದಿ ಮೋದಿ ಕ್ವಶ್ಚನ್' ಹೆಸರಿನ ವಿವಾದಿತ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿರುವ ಕ್ರಮವನ್ನು ಮರ್ಥಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಕೆ.ಆ್ಯಂಟನಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ಕುರಿತು ಮಾಡಿರುವ ಟ್ವೀಟ್ ಅನ್ನು ವಾಪಸ್ ಪಡೆಯಬೇಕೆಂದು ಬರುತ್ತಿರುವ ಫೋನ್ ಕರೆಗಳಿಂದ ಅಸಮಾಧಾನಗೊಂಡಿರುವ ಅನಿಲ್ ಕೆ.ಆ್ಯಂಟನಿ ಕಾಂಗ್ರೆಸ್ ಪಕ್ಷವನ್ನು ತೊರೆದಿರುವುದಾಗಿ ವರದಿಯಾಗಿದೆ.
ಇನ್ನು ಕೆಪಿಸಿಸಿ ಡಿಜಿಟಲ್ ಮಾಧ್ಯಮದ ಸಂಚಾಲಕನಾಗಿ ಮತ್ತು ಎಐಸಿಸಿ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಸಂವಹನ ಕೋಶದ ರಾಷ್ಟ್ರೀಯ ಸಹ-ಸಂಯೋಜಕನಾಗಿರುವ ನಾವು ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.