ಚಿಕ್ಕಮಗಳೂರು, ಜ 25 (DaijiworldNews/HR): ದತ್ತಪೀಠದ ದತ್ತಮಾಲೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಟಿ.ಡಿ.ರಾಜೇಗೌಡ ವಿರುದ್ಧ ಆಕ್ರೋಶ ಕೇಳಿಬಂದ ಹಿನ್ನೆಲೆ ಶಾಸಕರು ಕ್ಷಮ ಕೇಳಿರುವುದಾಗಿ ವರದಿಯಾಗಿದೆ.
ಜನರಿಗೆ ದತ್ತಮಾಲೆ ಹಾಕಿಸಿ, ಕುಂಕುಮವನ್ನು ಹಾಕಿ ಕರೆದುಕೊಂಡು ಹೋಗುತ್ತಾರೆ. ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು, ಬಾಬ್ರಿ ಮಸೀದಿ ಕೆಡವಲು ಹೋಗಿ ಲಕ್ಷಾಂತರ ಜನರು ಬಲಿಯಾದರು, ನಾನು ಬೈಯುತ್ತೇನೆ, ಜನರನ್ನು ಕರೆದುಕೊಂಡು ಹೋಗುವವರು ಮನೆಹಾಳರು.. ಎಂದು ಟಿ.ಡಿ.ರಾಜೇಗೌಡ ಶಾಸಕ ಮಾತನಾಡಿದ್ದರು.
ಇನ್ನು ಈ ವಿಚಾರದ ಕುರಿತಾಗಿ ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿದ್ದು, ಅಲ್ಲಿಂದಲೇ ವಿಡಿಯೋ ಮೂಲಕ ಟಿ.ಡಿ ರಾಜೇಗೌಡ ಕ್ಷಮೆ ಕೇಳಿದ್ದು, ಹಳ್ಳಿಗಳಲ್ಲಿ ರೂಡಿಯಿರುವ ಶಬ್ದವನ್ನು ಬೆಳೆಸಿದ್ದೇನೆ. ಆ ಶಬ್ದ ಬಳಕೆ ಯಾರ ಸಂಸ್ಕೃತಿಯು ಆಗಬಾರದು. ಆ ಶಬ್ದ ಬಳಸಬಾರದಿತ್ತು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.