ನವದೆಹಲಿ, ಜ 25( DaijiworldNews/MS): ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರಪತಿ ಭವನದಲ್ಲಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಎಲ್-ಸಿಸಿ ಅವರು ನಾಳೆ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್ನಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಂಗಳವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ಭಾರತಕ್ಕೆ ಆತ್ಮೀಯ ಸ್ವಾಗತ, ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ. ನಮ್ಮ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾರತಕ್ಕೆ ನಿಮ್ಮ ಐತಿಹಾಸಿಕ ಭೇಟಿಯು ಎಲ್ಲಾ ಭಾರತೀಯರಿಗೆ ಅಪಾರ ಸಂತೋಷದ ವಿಷಯವಾಗಿದೆ ಎಂದಿದ್ದಾರೆ.
ಉಭಯದೇಶಗಳು ಈ ವರ್ಷ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ.