ನವದೆಹಲಿ, ಜ 25 (DaijiworldNews/HR): ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಮುನ್ನ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಇದುವರೆಗೆ ಐವರು ವಿದ್ಯಾರ್ಥಿಗಳನ್ನೂ ಬಂಧಿಸಲಾಗಿದೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಹೊರಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
ಇನ್ನು ಈ ಸಂಬಂಧ ಕಾಂಗ್ರೆಸ್ ಯುವ ಘಟಕದ ವತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಇದನ್ನು ಗಮನಿಸಿದ ಕಾಲೇಜು ಅಧಿಕಾರಿಗಳು ಇದನ್ನು ಉಲ್ಲಂಘಿಸಿದರೆ ಕ್ರಮ ಜರುಗಿಸುವುದಾಗಿ ಸೂಚನೆ ಸಹಿತ ನೋಟಿಸ್ ಜಾರಿ ಮಾಡಿದ್ದಾರೆ.