ನವದೆಹಲಿ, ಜ 25( DaijiworldNews/MS): ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಾಣ ಮಾಡಿರುವ ವಿವಾದಿತ ಸಾಕ್ಷ್ಯ ಚಿತ್ರ ಪ್ರದರ್ಶನದ ಕುರಿತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದಲ್ಲಿ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದ ಎಂಸಿಆರ್ಸಿ ಲಾನ್ಸ್ನಲ್ಲಿ ಬುಧವಾರ ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ಆಯೋಜಿಸಿದೆ.
ಆದರೆ, ಕಾಲೇಜು ಆಡಳಿತ ಮಂಡಳಿಯೂ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಜಾಮಿಯಾ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಮತ್ತು ಕಟ್ಟುನಿಟ್ಟಾದ ನಿಗಾ ಇರಿಸಲಾಗಿದೆ.
ಇನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ವಿವಿಯ ಗೇಟ್ ಮುಂಭಾಗದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಶ್ರುವಾಯು ಹಾಗೂ ಜಲಫಿರಂಗಿ ವಾಹನಗಳು ಕೂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.