ನವದೆಹಲಿ, ಜ 25 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದಾಗಿ ವರದಿಯಾಗಿದೆ.
ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಸುಮಾರು 1.07 ಕೋಟಿ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಾಕೇತ್ ಗೋಖಲೆ ಅವರನ್ನು ಬಂಧಿಸಲಾಗಿದೆ.
ಇನ್ನು ಅಹಮದಾಬಾದ್ನಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಬಂಧಿಸಲಾಗಿದ್ದು ಸದ್ಯ ಗುಜರಾತ್ ಪೊಲೀಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.