ಬೆಂಗಳೂರು, ಜ 26 (DaijiworldNews/HR): ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುತ್ತಾ, ಪ್ರಜಾಪ್ರಭುತ್ವದ ಆಶಯಗಳನ್ನು ಸಾಕಾರಗೊಳಿಸಿ, ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ "ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ ಮಾಡಿದ್ದಾರೆ.
ಇನ್ನು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ನಾವೆಲ್ಲರೂ ಸೇರಿ ಕರ್ನಾಟಕ ರಾಜ್ಯವನ್ನು ಸ್ವಸ್ಥ ಮತ್ತು ಸಮೃದ್ಧವಾಗಿಸೋಣ ಹಾಗೂ ದೇಶದ ಸಾರ್ವಭೌಮತ್ವ ಏಕತೆ ಮತ್ತು ಅಖಂಡತೆಯನ್ನು ಬಲಿಷ್ಠಗೊಳಿಸುವ ಸಂಕಲ್ಪ ಮಾಡೋಣ ಮತ್ತು ಈ ನಿಟ್ಟಿನಲ್ಲಿ ನಾವು ಮುಂದುವರಿಯೋಣ ಎಂದು ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.