ತಿರುವಲ್ಲೂರ್, ಜ 26 (DaijiworldNews/HR): ಕೇಂದ್ರ ಸರ್ಕಾರವು ಲಜ್ಜೆಗೆಟ್ಟು ಹಿಂದಿ ಹೇರಿಕೆ ಮಾಡುತ್ತಿದ್ದು, ನಮ್ಮ ಸರ್ಕಾರ ಅದನ್ನು ತಡೆಯುವ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹಿಂದಿ ಹೇರಿಕೆ ಮಾಡುವುದನ್ನು ಅಭ್ಯಾಸ ಮಾಡಿಕೊಂಡಿದ್ದು, ಆಡಳಿತದಿಂದ ಹಿಡಿದು ಶಿಕ್ಷಣದವರೆಗೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ. ಹಿಂದಿಯನ್ನು ಹೇರುವುದಕ್ಕೆ ಅಧಿಕಾರಕ್ಕೆ ಬಂದಿದ್ದಾರೆ ಎಂದು ಅವರು ಅಂದುಕೊಂಡಿದ್ದಾರೆ ಎಂದರು.
ಇನ್ನು ಒಂದು ದೇಶ, ಒಂದು ಧರ್ಮ, ಒಂದು ಚುನಾವಣೆ, ಒಂದು ಪರೀಕ್ಷೆ, ಒಂದು ಆಹಾರ, ಒಂದು ಸಂಸ್ಕೃತಿ ಹೀಗೆ ಒಂದು ಭಾಷೆಯಿಂದ ಇತರ ರಾಷ್ಟ್ರೀಯ ಜನಾಂಗಗಳ ಸಂಸ್ಕೃತಿಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.