ಬಳ್ಳಾರಿ, ಜ 26 (DaijiworldNews/HR): ದೆಹಲಿಯಿಂದ ಕರ್ನಾಟಕದವರೆಗೆ ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂ.1 ಆಗಿದ್ದು, ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲೇ ಭ್ರಷ್ಟಚಾರ ಅಡಗಿದೆ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬಗ್ಗೆ ಆರೋಪಿಸುತ್ತಿರುವ ಕಾಂಗ್ರೆಸ್ ನವರು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಗಿದೆ ಎಂದರು.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಆರೋಪಿಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಕ್ಕೆ ರಾಯಭಾರಿ ಇದ್ದಂತೆ. ದೆಹಲಿಯಿಂದ ಕರ್ನಾಟಕದ ವರೆಗೆ ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂ.1. ಕಾಂಗ್ರೆಸ್ ಡಿಎನ್ಎದಲ್ಲೇ ಭ್ರಷ್ಟಾಚಾರ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.