ಸಿಂಧನೂರು, ಜ 26 (DaijiworldNews/HR): 74ನೇ ಗಣರಾಜ್ಯೋತ್ಸವದ ವೇಳೆ ಕೋಲಾಟ ಆಡುತ್ತಿದ್ದ ನೌಕರ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದಿದೆ.
ಸ್ಥಳೀಯ ಸರಕಾರಿ ಆಸ್ಪತ್ರೆಯ ನೌಕರ ಮಹಾಂತೇಶ ಪೂಜಾರ್ (40) ಮೃತರು.
ಇನ್ನು ಗರಡು ಗಮನ ಕೀರ್ತನೆಗೆ ತಂಡದೊಟ್ಟಿಗೆ ಕೋಲಾಟದಲ್ಲಿ ನಿರತರಾಗಿದ್ದಾಗ ದಿಢೀರ್ ಮೈದಾನದಲ್ಲೇ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ನಗರಸಭೆಯ ಕಾರಿನಲ್ಲಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ ಆಸ್ಪತ್ರೆಗೆ ಕರೆ ತರುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.