ರಾಮನಗರ, ಜ 26( DaijiworldNews/MS): ಕಾಂಗ್ರೆಸ್ಸಿಗೆ ಶ್ರೀರಾಮನ ಹೆಸರು ಕೇಳಿದರೆ ನಡುಕ ಪ್ರಾರಂಭವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ವ್ಯಂಗ್ಯವಾಡಿದರು.
ರಾಮನಗರದಲ್ಲಿ ಮಾತನಾಡಿದ ಅವರು, "ಈ ಹಿಂದೆ ಕ್ಲೋಸ್ ಪೇಟೆ ಆಗಿದ್ದ ರಾಮನಗರಕ್ಕೆ ಈಗಿನ ಹೆಸರು ಬರಲು ಶ್ರೀರಾಮನೇ ಕಾರಣ. ಪ್ರಭು ಶ್ರೀರಾಮಚಂದ್ರ ಬಹುಕಾಲ ನೆಲೆಸಿದ್ದ ರಾಮಗಿರಿಯಿಂದ ರಾಮನಗರವಾಗಿದೆ. ಹೀಗಾಗಿ ರಾಮಗಿರಿಯನ್ನು ದಕ್ಷಿಣದ ಅಯೋಧ್ಯೆಯಾಗಿ ಬೆಳೆಸಲು ಯೋಜಿಸಲಾಗಿದೆ" ಎಂದರು.
ಕಾಂಗ್ರೆಸ್ಸಿನವರು ರಾಮನನ್ನು ನೆನಪಿಸಿಕೊಂಡು, ಗೌರವಿಸಿದ ಉದಾಹರಣೆಗಳೇ ಇಲ್ಲ. ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಗೆ ಶ್ರೀರಾಮ ಅಂದ್ರೆ ನಡುಕ ಬರುತ್ತೆ. ಶ್ರೀರಾಮನು ಅಯೋಧ್ಯೆಯನ್ನು ಹೊರತುಪಡಿಸಿದರೆ ಹೆಚ್ಚು ಕಾಲ ಓಡಾಡಿದ್ದೇ ಇಂದಿನ ಕರ್ನಾಟಕದಲ್ಲಿ. ಇದನ್ನು ಕಾಂಗ್ರೆಸ್ಸಿಗರು ಮೊದಲು ತಿಳಿದುಕೊಳ್ಳಬೇಕು ಎಂದು ಹೇಳಿದರು.