ಜಮ್ಮು, ಜ 26 (DaijiworldNews/HR): ಕೇಂದ್ರಾಡಳಿತ ಪ್ರದೇಶದಲ್ಲಿ ಶಾಶ್ವತ ಶಾಂತಿಯನ್ನು ನೆಲೆಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ. ಭಯೋತ್ಪಾದನೆ ಮತ್ತು ಅದನ್ನು ಬೆಂಬಲಿಸುವುದನ್ನು ಕೊನೆಗೊಳಿಸಲು ಭದ್ರತಾ ಪಡೆಗಳು ನಿರತವಾಗಿವೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಮ್ಮುವಿನಲ್ಲಿ 74 ನೇ ಗಣರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ವಾತವರಣ ನೆಲೆ ನಿಂತಿದೆ ಎಂದರು.
ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರತಾ ಪಡೆಗಳ ಕಲ್ಯಾಣಕ್ಕಾಗಿ ಕೇಂದ್ರಾಡಳಿತ ಪ್ರದೇಶದದ ಆಡಳಿತ ಮತ್ತು ಕೇಂದ್ರವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದು, ಕೇಂದ್ರ ಸರ್ಕಾರವು ಕಾಶ್ಮೀರಿ ಪಂಡಿತರಿಂದ 8400 ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವರ ಭೂಮಿ ಮತ್ತು ಆಸ್ತಿಯನ್ನು 1990 ರಲ್ಲಿ ಬಲವಂತವಾಗಿ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಪರಿಶೀಲಿಸಿಲಾಗಿದ್ದು, ಕಾಶ್ಮೀರಿ ಪಂಡಿತರ ಆಸ್ತಿ ಪತ್ರಗಳನ್ನು ಹಿಂದಿರುಗಿಸಲಾಗಿದೆ ಎಂದು ಹೇಳಿದ್ದಾರೆ.