ನವದೆಹಲಿ, ಜ 26 (DaijiworldNews/DB): ಭಾರತದಲ್ಲೇ ತಯಾರಾದ ವಿಶ್ವದ ಮೊದಲ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ನ್ನು ಭಾರತ್ ಬಯೋಟೆಕ್ ಸಂಸ್ಥೆ ಗುರುವಾರ ಬಿಡುಗಡೆಗೊಳಿಸಿದೆ.
ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಲಸಿಕೆಯನ್ನು ಬಿಡುಗಡೆ ಮಾಡಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತೀ ಡೋಸ್ಗೆ 325 ರೂ.ಗಳಿಗೆ ಲಸಿಕೆ ಲಭ್ಯವಿದೆ. ಆದರೆ ಆಸ್ಪತ್ರೆಗಳಲ್ಲಿ ಇದರ ಬೆಲೆ 800 ರೂ.ಗಳಾಗಿದೆ. ವಾಷಿಂಗ್ಟನ್ ಯೂನಿವರ್ಸಿಟಿ, ಸೇಂಟ್ ಲೂಯಿಸ್ ಸಹಭಾಗಿತ್ವದಲ್ಲಿ ಲಸಿಕೆ ಅಭಿವೃದ್ದಿಪಡಿಸಲಾಗಿದೆ.
28 ದಿನಗಳ ಅಂತರದಲ್ಲಿ ಎರಡು ಡೋಸ್ ಲಸಿಕೆಯನ್ನು ಪಡೆದುಕೊಳ್ಳಬೇಕು. ಆದರೆ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಂಡವರು ಈ ಲಸಿಕೆ ಪಡೆದುಕೊಳ್ಳುವಂತಿಲ್ಲ. ಕೋವಿನ್ ವೆಬ್ಸೈಟ್ನಲ್ಲಿಯೂ ಲಸಿಕೆ ಪಡೆದುಕೊಳ್ಳಲು ಅನುಮತಿ ಕಾಯ್ದಿರಿಸಿಕೊಳ್ಳಲು ಅವಕಾಶವಿದೆ ಎಂದು ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ.
ಪ್ರಾಥಮಿಕ 2-ಡೋಸ್ ಶೆಡ್ಯೂಲ್ ಮತ್ತು ಭಿನ್ನಜಾತಿಯ ಬೂಸ್ಟರ್ ಡೋಸ್ಗೆ ಕಳೆದ ಡಿಸೆಂಬರ್ನಲ್ಲಿ ಸಂಸ್ಥೆ ಅನುಮೋದನೆ ಪಡೆದುಕೊಂಡಿತ್ತು.