ಬೆಂಗಳೂರು, ಜ 27 ( DaijiworldNews/MS): ದಲಿತ ಮಹಿಳೆಗೆ ವಂಚಿಸಿ, ಜಾತಿ ನಿಂದನೆ ಮಾಡಿ ಹಲ್ಲೆ ಸೇರಿದಂತೆ ವಿವಿಧ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿ ಎಂದು ವರದಿಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ? ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ ಎಂದು ಬರೆದುಕೊಂಡಿದೆ. ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ? ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ ಮುಖ್ಯಮಂತ್ರಿ ಬೊಮ್ಮಾಯಿಯವರೇ ಎಂದು ಕಟುವಾಗಿ ಟೀಕಿಸಿದೆ.
ಸಿಐಡಿ ಸೆಲ್ ನಲ್ಲಿದ್ದ ಸ್ಯಾಂಟ್ರೊ ಬಿಪಿ ಮತ್ತು ಶುಗರ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಮಾತ್ರೆ ಪಡೆಯುತ್ತಿದ್ದು, ನಿಯಮಿತ ಮಾತ್ರೆಗಳಿಂದ ಹೆಚ್ಚಾಗಿ ಔಷಧ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.
ಸ್ಯಾಂಟ್ರೋ ರವಿಯನ್ನಿ ಜ.೩೦ ರವರೆಗೆ ಸಿಐಡಿ ಕಸ್ಟಡಿಗೆ ನ್ಯಾಯಾಲಯ ಆದೇಶ ಮಾಡಿತ್ತು.