ಜೈಪುರ, ಜ 28 (DaijiworldNews/DB): ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ. ಅದನ್ನು ಎಲ್ಲಾ ನಾಗರಿಕರು ಪಾಲನೆ ಮಾಡಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ರಾಜಸ್ಥಾನದ ಭಿನ್ಮಾಲ್ ನ ನೀಲಕಂಠ ಮಹಾದೇವ ದೇವಾಲಯದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾನಿಗೊಂಡಿರುವ ಪವಿತ್ರ ಸ್ಥಳಗಳನ್ನು ಅಯೋಧ್ಯೆ ರಾಮಮಂದಿರ ಮಾದರಿಯಲ್ಲಿ ಪುನರ್ ನಿರ್ಮಾಣ ಮಾಡಬೇಕು. ಅದಕ್ಕಾಗಿ ಅಭಿಯಾನ ಪ್ರಾರಂಭಿಸಿದರೆ ಉತ್ತಮ ಎಂದರು.
ಭಗವಾನ್ ರಾಮನ ರಾಷ್ಟ್ರೀಯ ದೇವಾಲಯವು ರಾಷ್ಟ್ರೀಯ ಭಾವನೆಯನ್ನು ಪ್ರತಿನಿಧಿಸುತ್ತದೆ. ಇದರ ನಿರ್ಮಾಣ ಕಾರ್ಯವು ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದ 500 ವರ್ಷಗಳ ನಂತರ ನಡೆಯುತ್ತಿದೆ. ರಾಮ ಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬರ ಕೊಡುಗೆ ಅವಿಸ್ಮರಣೀಯ ಎಂದವರು ತಿಳಿಸಿದರು.
ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮವಾಗಿದೆ. ದೇಶದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದವರು ಇದೇ ವೇಳೆ ಹೇಳಿದರು.