ಪಟ್ನಾ, ಜ 30 (DaijiworldNews/HR): 'ಸಾಯುತ್ತೇನೆಯೇ ಹೊರತು ಮತ್ತೆ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುವುದಿಲ್ಲ' ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಮುಂಬರುವ ಸಾರ್ವತ್ರಿಕ ಚುನಾವಣೆ ವೇಳೆ, ಬಿಹಾರದಲ್ಲಿರುವ 40 ಲೋಕಸಭೆ ಕ್ಷೇತ್ರಗಳ ಪೈಕಿ 36ರಲ್ಲಿ ಗೆಲುವು ಸಾಧಿಸುವುದಾಗಿ ಬಿಜೆಪಿ ಹೇಳಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಈಗಿನ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹಾಗೂ ಅವರ ತಂದೆ ಲಾಲು ಪ್ರಸಾದ್ ಯಾದವ್ ವಿರುದ್ಧ ಆಧಾರ ರಹಿತ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದ ಬಳಿಕ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದು ತಪ್ಪು ಎಂದು ಹೇಳಿದ್ದಾರೆ.