ನವದೆಹಲಿ, ಜ 30 (DaijiworldNews/HR): ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಒಂಬತ್ತು ಲಕ್ಷಕ್ಕೂ ಹೆಚ್ಚು 15 ವರ್ಷಕ್ಕಿಂತ ಹಳೆಯದಾದ ವಾಹನಗಳು ಏಪ್ರಿಲ್ 1 ರಿಂದ ರಸ್ತೆಯಿಂದ ಹೊರಗುಳಿಯಲಿದ್ದು, ಅವುಗಳ ಬದಲಿಗೆ ಹೊಸ ವಾಹನಗಳು ರಸ್ತೆಗಿಳಿಯಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಎಥೆನಾಲ್, ಮೆಥನಾಲ್, ಬಯೋ-ಸಿಎನ್ಜಿ, ಬಯೋ-ಎಲ್ಎನ್ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸುಲಭಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.
ಇನ್ನು 15 ವರ್ಷಕ್ಕಿಂತ ಹೆಚ್ಚು ಹಳೆಯದಾದ ಒಂಬತ್ತು ಲಕ್ಷಕ್ಕೂ ಹೆಚ್ಚು ಸರ್ಕಾರಿ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ನಾವು ಈಗ ಅನುಮೋದಿಸಿದ್ದೇವೆ ಮತ್ತು ಮಾಲಿನ್ಯಕಾರಕವಲ್ಲದ ಬಸ್ಗಳು ಮತ್ತು ಕಾರುಗಳು ರಸ್ತೆಗಿಳಿಯುತ್ತವೆ. ಪರ್ಯಾಯ ಇಂಧನಗಳೊಂದಿಗೆ ಹೊಸ ವಾಹನಗಳ ಮೂಲಕ ಅವುಗಳನ್ನು ಬದಲಾಯಿಸುತ್ತವೆ. ಇದು ಹೆಚ್ಚಿನ ಪ್ರಮಾಣದಲ್ಲಿ ವಾಯು ಮಾಲಿನ್ಯವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.