ಆಂಧ್ರಪ್ರದೇಶ, ಜ 30 (DaijiworldNews/HR): ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿಮಾನವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ.
ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಗನ್ನವರಂ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದರು. ಲ್ಯಾಂಡ್ ಆದಾ ಸ್ವಲ್ಪ ಸಮಯದ ನಂತ್ರ ವಿಮಾನದಲ್ಲಿ ತಾಂತ್ರಿಕ ದೋಷವನ್ನ ಗಮನಿಸಿದ್ದು, ಪೈಲಟ್'ಗೆ ಎಚ್ಚರಿಕೆ ನೀಡಲಾಗಿದ್ದು, ಬಳಿಕ ವಿಮಾನವನ್ನ ಗನ್ನವರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಇನ್ನು ವಿಮಾನವು ಸಂಜೆ 5.03ಕ್ಕೆ ಗನ್ನವರಂ ವಿಮಾನ ನಿಲ್ದಾಣದಿಂದ ಹೊರಟಿತು. ಸಂಜೆ 5.26ಕ್ಕೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.