ನವದೆಹಲಿ, , ಜ 31( DaijiworldNews/MS): ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ನಾಳೆ ಬಹುನಿರೀಕ್ಷಿತ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಪ್ರಸಕ್ತ ವರ್ಷಕರ್ನಾಟಕ ಸಹಿತ ೯ ರಾಜ್ಯಗಳ ಚುನಾವಣೆಗಳು ನಡೆಯಲಿದೆ ಜತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆಯೂ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಕೊನೆಯ ಪೂರ್ಣ ಬಜೆಟ್ ಇದಾಗಿರುವ ಕಾರಣ ವೇತನದಾರರಿಗೆ ವೈಯಕ್ತಿಕ ಆದಾಯ ತೆರಿಗೆಯಲ್ಲಿ ಅನುಕೂಲವಾಗಬಹುದೇ, ಗೃಹ ಸಾಲ , ಹಿರಿಯ ನಾಗರಿಕರು ಸೇರಿದಂತೆ ಸಾಮಾನ್ಯ ಜನರಿಗೆ ವಿವಿಧ ತೆರಿಗೆ ಪರಿಹಾರ ಕ್ರಮಗಳೇನು ಸಿಗಬಹುದೇ ಎನ್ನುವ ನಿರೀಕ್ಷೆಗಳಿವೆ
ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದಾಗಿ ಹಣಕಾಸು ಸಚಿವರು ವಿತ್ತೀಯ ಕೊರತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಜನಪರ ಕಾರ್ಯಸೂಚಿ ನಡುವೆ ಸಮತೋಲನವನ್ನು ಕಂಡುಕೊಳ್ಳಬೇಕಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯ, ಉತ್ಪಾದನೆ, ಕೃಷಿ ಮತ್ತು ಇತರ ಪ್ರಮುಖ ಕ್ಷೇತ್ರಗಳಿಗೆ ಸುಧಾರಿತ ಹಣವನ್ನು ಕೇಂದ್ರೀಕರಿಸುವ ನಿರೀಕ್ಷೆಯಿದೆ.