ನವದೆಹಲಿ, ಫೆ 01 ( DaijiworldNews/MS): ಪಿ.ಎಂ ಕೇರ್ಸ್ ನಿಧಿಯು ಸರ್ಕಾರದ ನಿಧಿಯಲ್ಲ, ಇದು ಸರ್ಕಾರದ ಬೊಕ್ಕಸಕ್ಕೂ ಸೇರುವುದಿಲ್ಲ.ಇದರ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕೇಂದ್ರ, ರಾಜ್ಯ ಸರ್ಕಾರಗಳ ನಿಯಂತ್ರಣ ಇರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಚೇರಿ (ಪಿಎಂಒ) ಸ್ಪಷ್ಟಪಡಿಸಿದೆ.
ಈ ನಿಧಿಗೆ ಸಂಬಂಧಿಸಿ ಮಾಹಿತಿ ಹಕ್ಕು ಕಾಯ್ದೆಯಡಿ (ಆರ್ಟಿಐ) ಮಾಹಿತಿಗಳನ್ನು ಮೂರನೇ ವ್ಯಕ್ತಿಗೆ ಮಾಹಿತಿ ನೀಡಲಾಗದು. ಪಿ.ಎಂ.ಕೇರ್ಸ್ ಟ್ರಸ್ಟ್ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪಿ.ಎಂ ಕೇರ್ಸ್ ನಿಧಿಯ ಮೇಲ್ವಿಚಾರಣೆಯನ್ನು ಗಮನಿಸುವ ಅಧೀನ ಕಾರ್ಯದರ್ಶಿಯು ಈ ಸಂಬಂಧ ದೆಹಲಿ ಹೈಕೋರ್ಟ್ಗೆ ಲಿಖಿತವಾಗಿ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಪಿ.ಎಂ ಕೇರ್ಸ್ ನಿಧಿಯನ್ನು ಸಂವಿಧಾನದ ವ್ಯಾಪ್ತಿಗೆ ತರಬೇಕು ಮತ್ತು ಅದರ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ನಿರ್ದೇಶನ ನೀಡಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಯಾಗಿ ಈ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ.