ನವದೆಹಲಿ, ಫೆ 01 (DaijiworldNews/DB): ದೇಶದಲ್ಲಿ ರೈಲು ಸೇವೆಯನ್ನು ಜನಸಾಮಾನ್ಯರಿಗೆ ಇನ್ನಷ್ಟು ಹತ್ತಿರಗೊಳಿಸುವ ಸಲುವಾಗಿ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ 2.40 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
2023-24ನೇ ಸಾಲಿನ ಬಜೆಟ್ನಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಅವರು, ರೈಲ್ವೇ ಸೇವೆ ದೇಶದ ಜನಸಾಮಾನ್ಯರಿಗೆ ಬೇಕಾಗಿರುವ ಅತ್ಯಗತ್ಯ ಸೇವೆಗಳಲ್ಲೊಂದು. ಜನಸಾಮಾನ್ಯರಿಗೆ ರೈಲ್ವೇ ಸೇವೆಯನ್ನು ಉತ್ತಮ ನಿಟ್ಟಿನಲ್ಲಿ ತಲುಪಿಸುವ ಸಲುವಾಗಿ ಈ ಕ್ಷೇತ್ರದಲ್ಲಿ ಹಲವು ಮಹತ್ತರ ಅಭಿವೃದ್ದಿ ನಡೆಸಲಾಗುವುದು. ಇದಕ್ಕಾಗಿ ಈ ಬಾರಿಯ ಬಜೆಟ್ನಲ್ಲಿ ರೈಲ್ವೇ ಇಲಾಖೆಗೆ 2.40 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದರು.
ಸರಕು ಸಾಗಣೆಗೆ ನೂರು ಹೊಸ ಸಾರಿಗೆ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಕಲ್ಲಿದ್ದಲು, ಸಿಮೆಂಟ್, ಸ್ಟೀಲ್, ರಸಗೊಬ್ಬರ ಸಾಗಣೆಗೂ ಯೋಜನೆ ರೂಪಿಸಲಾಗುವುದು ಎಂದು ಅವರು ತಿಳಿಸಿದರು.