ನವದೆಹಲಿ, ಫೆ 01 (DaijiworldNews/DB): ಮೀನುಗಾರರು, ಕರಕುಶಲಕರ್ಮಿಗಳಿಗೆ ಉತ್ತೇಜನ ನೀಡುವ ಕೆಲಸಗಳು ಕೇಂದ್ರ ಸರ್ಕಾರದಿಂದ ನಡೆಯಲಿದೆ. ಮತ್ಸ್ಯ ಸಂಪದ ಯೋಜನೆಯಡಿ 6,000 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
2023-24ನೇ ಸಾಲಿನ ಬಜೆಟ್ನಲ್ಲಿ ಮೀನುಗಾರರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೀನುಗಾರರ ಕಲ್ಯಾಣದ ದೃಷ್ಟಿಯಿಂದ ಹಲವು ಮಹತ್ವದ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಲಿದೆ. ಅದಕ್ಕಾಗಿ ಮತ್ಸ್ಯ ಸಂಪದ ಯೋಜನೆಯಡಿ 6,000 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗುವುದು ಎಂದರು.
ಇನ್ನು ಪಿಎಂ ವಿಶ್ವಕರ್ಮ ಕೌಶಲ ಸನ್ಮಾನ್ ಯೋಜನೆಯಡಿ ಪಾರಂಪರಿಕ ಕರಕುಶಲಕರ್ಮಿಗಳಿಗೆ ನೆರವಾಗಲು ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳೊಂದಿಗೆ ಇವರನ್ನು ಜೋಡಿಸಿ, ಕುಶಲಕರ್ಮಿಗಳ ಅರ್ಥಿಕ ಸ್ಥಿತಿಗತಿ ಸುಧಾರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.