ನವದೆಹಲಿ, ಫೆ 01 (DaijiworldNews/DB): ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್ನಲ್ಲಿ ಚಿನ್ನಾಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ ನೀಡಿದ್ದಾರೆ. ಚಿನ್ನ, ಬೆಳ್ಳಿ, ವಜ್ರ, ಪ್ಲಾಟಿನಂಗಳ ಬೆಲೆ ಇನ್ಮುಂದೆ ದುಬಾರಿಯಾಗಲಿದೆ.
2023-24ನೇ ಸಾಲಿನ ಬಜೆಟ್ನಲ್ಲಿ ಈ ಅಂಶವನ್ನು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ್ದು, ಚಿನ್ನಾಭರಣಗಳು ಬೆಲೆ ದುಬಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಬಂಗಾರ, ಬೆಳ್ಳಿ, ವಜ್ರ, ಪ್ಲಾಟಿನಂ ಬೆಲೆ ದುಬಾರಿಯಾಗಲಿದೆ ಎಂದು ಹೇಳಿದ್ದಾರೆ.
ಇನ್ನು ವಿದೇಶೀ ವಾಹನಗಳ ಆಮದು ಶುಲ್ಕವೂ ದುಬಾರಿಯಾಗಲಿದೆ. ಅಲ್ಲದೆ ರೆಡಿಮೇಟ್ ಬಟ್ಟೆ ಬೆಲೆ ಏರಿಕೆಯಾಗಲಿದೆ ಎಂದೂ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.
ಅಡುಗೆ ಮನೆಯ ಎಲೆಕ್ಟ್ರಿಕ್ ಚಿಮಣಿಗಳ ಬೆಲೆ ಇಳಿಕೆಯಾಗಲಿದೆ. ಮೊಬೈಲ್ ಫೋನ್, ಕ್ಯಾಮರಾ ಲೆನ್ಸ್ ಆಮದು ಸುಂಕ ರದ್ದುಗೊಳ್ಳಲಿದ್ದು, ಮೊಬೈಲ್, ಕ್ಯಾಮರಾ ಲೆನ್ಸ್, ಟಿವಿ ಬೆಲೆ ಇಳಿಕೆಯಾಗಲಿದೆ. ಲಿಥೀಯಂ ಬ್ಯಾಟರಿ ಮೇಲಿನ ಸುಂಕ ಕಡಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.