ನವದೆಹಲಿ, ಫೆ 01 (DaijiworldNews/HR): ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ ಆಗಲಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕರ್ನಾಟಕದ ಮೇಲ್ಮಟ್ಟದ ಭದ್ರಾ ಪ್ರದೇಶಕ್ಕೆ 5,000 ಕೋಟಿ ರೂಪಾಯಿಗೂ ಹೆಚ್ಚು ನೀರಾವರಿ ಯೋಜನೆಯನ್ನು ಘೋಷಿಸಿದ್ದಕ್ಕಾಗಿ ನಾನು ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.
ಇನ್ನು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆಗಳಿದ್ದು ಬಹು ಬೇಡಿಕೆಯ ಭದ್ರಾ ಮೇಲ್ದಂಡೆ ಯೋಜನೆಗೆ ಇಂದಿನ ಬಜೆಟ್ ನಲ್ಲಿ 5300 ಕೋಟಿ ರೂ. ಅನುದಾನವನ್ನು ಘೋಷಿಸಲಾಗಿದೆ.