ಬೆಂಗಳೂರು, ಫೆ 02 ( DaijiworldNews/MS): ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಪಟ್ಟಿ ತಯಾರಿಯಲ್ಲಿರುವ ಕಾಂಗ್ರೆಸ್ ಗುರುವಾರ ಮಹತ್ವದ ಸಭೆ ನಡೆಸಲಿದೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಫೆಬ್ರವರಿ 15ರೊಳಗೆ 130 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ಪ್ರಯತ್ನಗಳು ನಡೆಯುತ್ತಿದ್ದು, ಸಭೆಯ ನಂತರ ಪಟ್ಟಿಯನ್ನು ಎಐಸಿಸಿಗೆ ಕಳುಹಿಸಲಾಗುವುದು.
ತೀವ್ರ ಪೈಪೋಟಿ ಇರುವ ಕ್ಷೇತ್ರಗಳ ಹೆಸರು ಎರಡನೇ ಪಟ್ಟಿಯಲ್ಲಿ ಬಿಡುಗಡೆ ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ. 130 ಕ್ಷೇತ್ರಗಳಿಗೆ ಒಂದೇ ಹೆಸರು ಕೆಪಿಸಿಸಿಯಿಂದ ಶಿಫಾರಸು ಮಾಡುವ ಸಾಧ್ಯತೆ ಹೆಚ್ಚಾಗಿದೆ.
ಪಕ್ಷದಿಂದ ನಡೆಸಲಾದ ಸಮೀಕ್ಷೆ ಹಾಗೂ ಜಿಲ್ಲಾ ಮತ್ತು ಬ್ಲಾಕ್ ಶಿಫಾರಸು ಮತ್ತು ಕಾರ್ಯಾಧ್ಯಕ್ಷರು ನೀಡಿದ ವರದಿ ಎಲ್ಲವನ್ನು ಪರಿಶೀಲಿಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ.