ನವದೆಹಲಿ, ಫೆ 03 (DaijiworldNews/HR): 2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ನೇತೃತ್ವದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ ಎಂ ಸುಂದ್ರೇಶ್ ಅವರನ್ನೊಳಗೊಂಡ ಸರ್ವೋಚ್ಚ ನ್ಯಾಯಪೀಠ ಇಂದು ವಿಚಾರಣೆ ಆಲಿಸಲಿದೆ.
ಇನ್ನು ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಹಿರಿಯ ಪತ್ರಕರ್ತ ಎನ್ ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಮತ್ತು ವಕೀಲ ಎಂಎಲ್ ಶರ್ಮಾ ಅವರು ಬಿಬಿಸಿ ಸಾಕ್ಷ್ಯಚಿತ್ರವನ್ನು ಸೆನ್ಸಾರ್ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.