ಗುವಾಹಟಿ, ಫೆ 03 (DaijiworldNews/DB): ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ರಾಜ್ಯದಲ್ಲಿ ಈವರೆಗೆ 1,800ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಟ್ವೀಟ್ ಮಾಡಿರುವ ಅವರು, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗುಗಳ ವಿರುದ್ದ ಹೋರಾಟಲು ಸರ್ಕಾರ ಕಠಿಬದ್ದವಾಗಿದೆ. ಈ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ ವಹಿಸಬೇಕೆಂದು ಪೊಲೀಸರಿಗೆ ಈಗಾಗಲೇ ಸೂಚಿಸಲಾಗಿದೆ. ಇಲ್ಲಿವರೆಗೆ ಬಾಲ್ಯವಿವಾಹವಾದ 1,800 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಾಲ್ಯ ವಿವಾಹ ನಿಷೇಧ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿ ಬಾಲ್ಯವಿವಾಹವಾಗುತ್ತಿರುವವರ ವಿರುದ್ದ ಸರ್ಕಾರ ನಿರಂತರ ಕ್ರಮ ಕೈಗೊಳ್ಳಲಿದೆ. ರಾಜ್ಯಾದ್ಯಂತ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದರು. ಇನ್ನು ಕಳೆದ ಹದಿನೈದು ದಿನಗಳಲ್ಲಿ ರಾಜ್ಯದಲ್ಲಿ 4,000ಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಶುಕ್ರವಾರದಿಂದಲೇ ಪೊಲೀಸರು ಫೀಲ್ಡ್ಗಿಳಿಯಲಿದ್ದಾರೆ ಎಂದು ನಿನ್ನೆಯಷ್ಟೇ ಅಸ್ಸಾಂ ಸಿಎಂ ಹೇಳಿದ್ದರು.