ನವದೆಹಲಿ, ಫೆ 03 (DaijiworldNews/DB): ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ, ಸಂಸದೆ ಪ್ರಣೀತ್ ಕೌರ್ ಅವರು ಕಾಂಗ್ರೆಸ್ನಿಂದ ಶುಕ್ರವಾರ ಅಮಾನತುಗೊಂಡಿದ್ದಾರೆ.
ಸಂಸದೆ ಪ್ರಣೀತ್ ಕೌರ್ ಭಾರತೀಯ ಜನತಾ ಪಕ್ಷಕ್ಕೆ ಸಹಾಯ ಮಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಪಕ್ಷ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ಪ್ರಣೀತ್ ಕೌರ್ ಅವರು ಬಿಜೆಪಿಗೆ ಸಹಾಯ ಮಾಡುವ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ದ ಪಕ್ಷದ ಶಿಸ್ತು ಕ್ರಮ ಸಮಿತಿಯು ಕ್ರಮ ಕೈಗೊಂಡಿದೆ ಎಂದು ಕಾಂಗ್ರೆಸ್ ತಿಳಿಸಿದೆ.