ನವದೆಹಲಿ, ಫೆ (DaijiworldNews/HR): ಮದ್ಯ ಮಾರಾಟ ನೀತಿಯ ಭ್ರಷ್ಟಾಚಾರದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಗಳ ಮುಂದೆ ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಪೂರಕ ಚಾರ್ಜ್ ಶೀಟ್ ಪ್ರಶ್ನಿಸಿದ್ದಕ್ಕಾಗಿ ಕೇಜ್ರಿವಾಲ್ರನ್ನು ಬಿಜೆಪಿ ಗುರಿಯಾಗಿಸಿದೆ ಮತ್ತು ಅವರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ ಎಂದು ಹೇಳಿದೆ.
ಇನ್ನು ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಐದು ವ್ಯಕ್ತಿಗಳು ಮತ್ತು ಏಳು ಕಂಪನಿಗಳ ವಿರುದ್ಧದ ಪೂರಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯವು ಗುರುವಾರ ಸ್ವೀಕರಿಸಿದೆ.