ಚೆನ್ನೈ, ಫೆ (DaijiworldNews/HR): ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ಅವರು ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ.
ವಾಣಿ ಜಯರಾಂ ಅವರಿಗೆ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿತ್ತು. ಅವರು ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಟಿ, ಬೆಂಗಾಲಿ, ಬೋಜ್ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಾಡಿದ್ದಾರೆ.
ಇನ್ನು ಚೆನ್ನೈ ಹಡ್ಡೊಸ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದು, ಮನೆಯಲ್ಲಿ ಆಯತಪ್ಪಿ ಬಿದ್ದಿರುವ ವಾಣಿ ಜಯರಾಂ ತಲೆಗೆ ತೀವ್ರವಾಗಿ ಗಾಯವಾಗಿತ್ತು. ಈ ಗಾಯದಿಂದ ವಾಣಿ ಜಯರಾಂ ಮೃತಪಟ್ಟಿದ್ದಾರೆ ಎನ್ನಲಾಗಿದೆ.