ಬೆಂಗಳೂರು, ಫೆ 06 ( DaijiworldNews/MS): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಫೆ.6) ರಾಜ್ಯಕ್ಕೆ ಭೇಟಿ ನೀಡಲಿದ್ದು ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಭಾರತ ಜಿ20 ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್ 2023 ಉದ್ಘಾಟಿಸಲಿದ್ದಾರೆ . ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್ ಮೊಬಿಲಿಟಿ ರ್ಯಾಲಿ ಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಗ್ರೀನ್ ಮೊಬಿಲಿಟಿ ರ್ಯಾಲಿಯೂ ಹಸಿರು ಇಂಧನ ಮೂಲಗಳ ಮೇಲೆ ಚಲಿಸುವ ವಾಹನಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ ಮತ್ತು ಹಸಿರು ಇಂಧನಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡುತ್ತದೆ.
ಅಲ್ಲದೆ ರ್ಯಾಲಿ ಹಿನ್ನೆಲೆಯಲ್ಲಿ 1000-1,500 ವಿದ್ಯಾರ್ಥಿಗಳ ರವಾನಿಸುವಂತೆ ನಗರದ 6 ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
ಇದಾದ ಬಳಿಕ ತುಮಕೂರು ಬಳಿ ಎಚ್ ಎ ಎಲ್ ’ ಹೆಲಿಕ್ಯಾಪ್ಟರ್ ತಯಾರಿಕಾ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದಲದೆ ವಿವಿಧ ಶಂಕುಸ್ಪಾಪನೆ ನೆರವೇರಿಸಲಿದ್ದಾರೆ.