ಹೈದರಾಬಾದ್, ಫೆ 05 (DaijiworldNews/HR): ಹೈದರಾಬಾದ್ನಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಅಬ್ದುಲ್ ಜಾಹೀದ್ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದು, ಬಂಧಿತರಿಂದ ಹ್ಯಾಂಡ್ ಗ್ರೆನೇಡ್, ಮೊಬೈಲ್ ಹಾಗೂ 3ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಶಂಕಿತ ಉಗ್ರರು ಹೈದರಾಬಾದ್ ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಬಂಧಿತರ ವಿರುದ್ಧ ಯುಎಪಿಎ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಲಾಗಿದೆ.