ಕೋಲ್ಕತ್ತ, ಫೆ 05 (DaijiworldNews/HR): ಬಿರ್ಭುಮ್ ಜಿಲ್ಲೆಯ ಮಾರ್ಗರ್ಮ್ನಲ್ಲಿ ಬಾಂಬ್ ಸ್ಫೋಟ ಸಂಭವಿಸಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರೊಬ್ಬರು ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ನ್ಯೂಟನ್ ಶೇಖ್ ಎಂದು ಗುರುತಿಸಲಾಗಿದೆ.
ಮಾರ್ಗರ್ಮ್ ಪಂಚಾಯಿತಿಯ ಟಿಎಂಸಿ ಮುಖ್ಯಸ್ಥರ ಸಹೋದರ ಲಲ್ತು ಶೇಖ್ ಅವರು ಗಾಯಗೊಂಡಿದ್ದು, ಅವರನ್ನು ಕೋಲ್ಕತ್ತದಲ್ಲಿರುವ ಎಸ್ಎಸ್ಕೆಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ನ್ಯೂಟನ್ ಶೇಖ್ ಅವರ ಕುಟುಂಬದವರು, ದಾಳಿಯ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಈ ಆರೋಪವನ್ನು ತಳ್ಳಿಹಾಕಿದ್ದಾರೆ.