ಮೈಸೂರು, ಫೆ 06 (DaijiworldNews/HR): ನಮ್ಮ ಕುಟುಂಬದಲ್ಲಿ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು, ರಾಜ್ಯಾಧ್ಯಕ್ಷರು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಎಚ್.ಡಿ. ರೇವಣ್ಣ ಮಂಡ್ಯ ಜಿಲ್ಲೆಯಿಂದ ಸ್ಪರ್ಧಿಸುವ ವಿಚಾರವೂ ನನಗೆ ಗೊತ್ತಿಲ್ಲ. ನಾನು ರಾಜ್ಯಾಧ್ಯಕ್ಷ ಅಲ್ಲ, ಯುವ ಘಟಕದ ಅಧ್ಯಕ್ಷ. ನನ್ನ ಇತಿಮಿತಿಯಲ್ಲಿ ಅಷ್ಟೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.
ಇನ್ನು ಕುಮಾರಸ್ವಾಮಿ ಅವರು ಏಕಾಂಗಿಯಾಗಿ ರಾಜ್ಯ ಸುತ್ತುತ್ತಿದ್ದಾರೆ. ಈ ಬಾರಿ 40ರಿಂದ 50 ಸ್ಥಾನಕ್ಕೆ ಜೆಡಿಎಸ್ ಸೀಮಿತವಾಗುವುದಿಲ್ಲ. 123 ಸ್ಥಾನವನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೇವೆ. ಜಿ.ಟಿ. ದೇವೇಗೌಡರಿಗೆ ಕಾಂಗ್ರೆಸ್ ನಾಯಕರು ಹಾಕಿದ್ದ ಸವಾಲಿಗೆ ನೀವೆಲ್ಲ ಉತ್ತರ ನೀಡಿದ್ದೀರಿ ಎಂದು ಹೇಳಿದ್ದಾರೆ.