ಗುವಾಹತಿ, ಫೆ 06 (DaijiworldNews/HR): ವಿರೋಧದ ನಡುವೆಯೇ ಅಸ್ಸಾಂ ಪೊಲೀಸರು ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಮಂದಿಯನ್ನು ಬಂಧಿಸಿದ್ದಾರೆ.
ಬಾಲ್ಯವಿವಾಹ ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸ್ಪಷ್ಟಪಡಿಸಿದ್ದರು. ಆದರೆ, ಇದು ತರಾತುರಿಯಲ್ಲಿ ನಡೆಸಿದ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ.
ಇನ್ನು ಬಾಲ್ಯ ವಿವಾಹ ತಡೆ ಕಾಯ್ದೆ ಅಡಿಯಲ್ಲಿ ಅಸ್ಸಾಂನಲ್ಲಿ 4,074 ಎಫ್ಐಆರ್ಗಳು ದಾಖಲಾಗಿದ್ದು, ಅದರ ಆಧಾರದಲ್ಲಿ ಬಂಧನ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.