ಬೆಂಗಳೂರು, ಫೆ 06 (DaijiworldNews/HR): ಕರ್ನಾಟಕ ಹೈಕೋರ್ಟ್ಗೆ ಇಬ್ಬರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ರಾಷ್ಟ್ರಪತಿಗಳ ಅನುಮತಿ ಮೇರೆಗೆ ಕೇಂದ್ರ ಕಾನೂನು ಮತ್ತು ನ್ಯಾಯ ಇಲಾಖೆಯು ವಕೀಲರಾದ ವಿಜಯಕುಮಾರ್ ಅಡಗೌಡ ಪಾಟೀಲ್ ಮತ್ತು ರಾಜೇಶ್ ರೈ ಕಲ್ಲಂಗ್ಲ ಅವರನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಇನ್ನು ಇವರಲ್ಲಿ ರಾಜೇಶ್ ರೈ ಅವರು ಕರಾವಳಿ ಮೂಲದವರಾಗಿದ್ದು, ಸಿವಿಲ್ ಹಾಗೂ ಕ್ರಿಮಿನಲ್ ಕೇಸುಗಳನ್ನು ನಡೆಸುವುದರಲ್ಲಿ ಪ್ರಸಿದ್ಧರಾಗಿದ್ದಾರೆ.