ತಿರುವನಂತಪುರ, ಫೆ 07 ( DaijiworldNews/MS): ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಸೋಮವಾರ ರಾತ್ರಿ ನೆಯ್ಯಟ್ಟಿಂಕರ ನಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಜ್ವರದ ಕಾರಣ ಉಮ್ಮನ್ ಚಾಂಡಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಇಂದು ಬೆಳಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರನ್ನು ಭೇಟಿ ಮಾಡಲಿದ್ದಾರೆ.
ತಂದೆಗೆ ನ್ಯುಮೋನಿಯಾ ಕಾಣಿಸಿಕೊಂಡಿದ್ದು, ತೀವ್ರ ಜ್ವರದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ಫೇಸ್ಬುಕ್ ಪೋಸ್ಟ್ನಲ್ಲಿ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮೊದಲಿಗೆ ಉಮ್ಮನ್ ಚಾಂಡಿ ಅವರಿಗೆ ಸರಿಯಾದ ವೈದ್ಯಕೀಯ ಸೇವೆ ನಿರಾಕರಿಸಲಾಗುತ್ತಿದೆ ಎಂದುಅವರ ಸಂಬಂಧಿಕರು ಆರೋಪಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಅವರ ಆರೋಗ್ಯದ ಬಗ್ಗೆ ವರದಿಗಳು ಕೇಳಿಬರುತ್ತಿದ್ದಂತೆ, ಚಾಂಡಿ ಅವರು ತಮ್ಮ ಮಗನ ಫೇಸ್ಬುಕ್ ಪುಟದಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ, ಅವರನ್ನು ಅವರ ಕುಟುಂಬ ಮತ್ತು ಪಕ್ಷವು ಸರಿಯಾಗಿ ನೋಡಿಕೊಳ್ಳುತ್ತಿದೆ ಎಂದು ಹೇಳಿಕೊಂಡಿದ್ದಾರೆ. ವಿಡಿಯೋದಲ್ಲಿ, ತನ್ನ ದುರ್ಬಲ ಧ್ವನಿಯಿಂದ ತುಂಬಾ ದುರ್ಬಲವಾಗಿ ಕಂಡುಬಂದ ಚಾಂಡಿ, ಕಾಯಿಲೆಗೆ ಪಡೆಯುವ ಚಿಕಿತ್ಸೆಯಿಂದ ತುಂಬಾ ತೃಪ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ.