ಮುಂಬೈ, ಫೆ 07 ( DaijiworldNews/MS): ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಹಿಂಡೆನ್ ಬರ್ಗ್ ವರದಿಯನ್ನು "ವಿದೇಶಿ ಪಿತೂರಿ "ಎಂದು ಟೀಕಿಸಿದ್ದಾರೆ.
ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್ ಬರ್ಗ್ ಅದಾನಿ ಸಮೂಹದ ಕುರಿತ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳು ಪಾತಾಳಕ್ಕೆ ಕುಸಿದಿವೆ. ಅಲ್ಲದೆ ಈ ಎಲ್ಲ ಬೆಳವಣಿಗೆ ಕಾರಣಕ್ಕೆ ಗೌತಮ್ ಅದಾನಿ ಸಂಪತ್ತಿನಲ್ಲಿ ತೀವ್ರ ಇಳಿಕೆ ಕಂಡುಬಂದಿದೆ.ಹೀಗಾಗಿ ಭಾರತೀಯ ಶ್ರೀಮಂತರ ಪಟ್ಟಿಯಲ್ಲಿ ಮೊದಲನೇ ಹಾಗೂ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ, ಈಗ ವಿಶ್ವದ ಟಾಪ್ 20 ಶ್ರೀಮಂತರ ಪಟ್ಟಿಯಿಂದಲೂ ಹೊರ ಬಿದ್ದಿದ್ದಾರೆ.
ಈ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಭಾರತದ ಪ್ರಗತಿಯನ್ನು ಇಂಗ್ಲೆಂಡ್ ಗೆ ಸಹಿಸಲು ಸಾಧ್ಯವಿಲ್ಲ. ಭಾರತೀಯ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡು ನಡೆಸಿದ "ಪೂರ್ವ ನಿಯೋಜಿತ" ಯೋಜನೆ ಇದು . ನೀವು ಎಷ್ಟೇ ಪಿತೂರಿ ನಡೆಸಿದರೂ ಭಾರತ ಇದೆಲ್ಲದರಿಂದ ಹೊರಬಂದು ಮತ್ತಷ್ಟು ಸಶಕ್ತವಾಗಿ ಹೊರ ಹೊಮ್ಮಲಿದೆ ಎಂದು ವೀರೇಂದ್ರ ಸೆಹ್ವಾಗ್ ಅದಾನಿ ಸಮೂಹ ಸಂಸ್ಥೆ ಪರ ಬ್ಯಾಟಿಂಗ್ ಮಾಡಿದ್ದಾರೆ.