ನವದೆಹಲಿ, ಫೆ 07 ( DaijiworldNews/MS): '6 ಸಾವಿರ ಕೊಟ್ರೆ ನಮಗೆ ವೋಟ್ ಹಾಕಿ'.. ಹೇಳಿಕೆಗೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ದೆಹಲಿಯಲ್ಲಿ ಆಯೋಗಕ್ಕೆ ದೂರು ಸಲ್ಲಿಸಿದೆ. ನಂತರ ಮಾತನಾಡಿದ ರಣದೀಪ್ ಸುರ್ಜೇವಾಲ "ಮುಂದಿನ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಮತಗಳನ್ನು ಕಳೆದುಕೊಳ್ಳಲಿದೆ" ಎಂದು ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ಹೇಳಿಕೆ ವಿರುದ್ದ ಆಯೋಗಕ್ಕೆ ದೂರು ನೀಡಿದ್ದೇವೆ. ಬಿಜೆಪಿ ಒಂದು ವೋಟ್ ಗೆ ಆರು ಸಾವಿರ ರೂಪಾಯಿ ನೀಡಿ ಖರೀದಿಸಲಿದೆ ಎಂದಿದ್ದಾರೆ್ .ಈ ಹೇಳಿಕೆ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ, ಜೆ.ಪಿ ನಡ್ಡಾ, ನಳಿನ್ ಕುಮಾರ್ ಕಟೀಲು, ಪಿತೂರಿ ಇದೆ. ಹಾಗಾಗಿ ಸಂಪೂರ್ಣ ತನಿಖೆ ಮಾಡಲು ಒತ್ತಾಯ ಮಾಡಿದ್ದೇವೆ. ದೂರು ನೀಡಿದರೂ ಕರ್ನಾಟಕ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಈ ಬಗ್ಗೆಯೂ ಕೇಂದ್ರ ಚುನಾವಣಾ ಆಯೋಗಕ್ಕೆ ನಾವು ತಿಳಿಸಿದ್ದೇವೆ ಎಂದಿದ್ದಾರೆ.