ನವದೆಹಲಿ, ಫೆ 07 (DaijiworldNews/HR): ಪಂಜಾಬ್'ನ ಲುಧಿಯಾನ ಕೋರ್ಟ್ ಕಾಂಪ್ಲೆಕ್ಸ್ ಬಳಿ ಇಬ್ಬರ ಮೇಲೆ ಗುಂಡು ಹಾರಿಸಿ ಆರೋಪಿ ಪರಾರಿಯಾಗಿರುವ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೊಚ್ಚರ್ ಮಾರ್ಕೆಟ್ ಬಳಿಯ ಲುಧಿಯಾನ ನ್ಯಾಯಾಲಯದ ಆವರಣದ ಹೊರಗೆ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಇನ್ನು ಮೂರು ಗುಂಡುಗಳನ್ನು ಹಾರಿಸಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.