ಬೆಂಗಳೂರು, ಫೆ 07 ( DaijiworldNews/MS): ರಾಜ್ಯದಲ್ಲಿ ಹೊಸದಾಗಿ 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಕೋರ್ಟ್ ಅನುಮತಿ ಮೇರೆಗೆ ಈಗಾಗಲೇ 15000 ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಅದು ಅನುಷ್ಠಾನವಾಗಲಿದೆ. ಮೂಲಭೂತ ಸೌಕರ್ಯ, ಶಿಕ್ಷಕರ ಕೊರತೆ ಸೇರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ
ಇದಲ್ಲದೆ ಸಂಘ-ಸಂಸ್ಥೆ ನೆರವಿನಿಂದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದೆಂದು ತಿಳಿಸಿದ್ದಾರೆ.