ನವದೆಹಲಿ, ಫೆ 08 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಅವರು ಪ್ಲಾಸ್ಟಿಕ್ ಬಾಟಲಿ ಮರುಬಳಕೆ ಮಾಡಿ ಸಿದ್ಧಪಡಿಸಿದ ನೀಲಿ ಬಣ್ಣದ ಜಾಕೆಟ್ ಅನ್ನು ಧರಿಸಿ ಬುಧವಾರ ಸಂಸತ್ತಿನಲ್ಲಿ ಕಾಣಿಸಿಕೊಂಡಿದ್ದು, ಇದೀಗ ಅವರ ಪೊಟೋ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಸೋಮವಾರ ನಡೆದ ಇಂಡಿಯಾ ಎನರ್ಜಿ ವೀಕ್ನಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಈ ಜಾಕೆಟ್ ಅನ್ನು ಪ್ರಧಾನಿಯವರಿಗೆ ಉಡುಗೊರೆಯಾಗಿ ನೀಡಿದ್ದು, ಐಒಸಿಎಲ್ ವಾರ್ಷಿಕವಾಗಿ 10 ಕೋಟಿ ಪ್ಲಾಸ್ಟಿಕ್ ಬಾಟಲಿಗಳನ್ನು ಬಟ್ಟೆಯಾಗಿ ಮರುಬಳಕೆ ಮಾಡುತ್ತದೆ.
ಇನ್ನು ತ್ಯಾಜ್ಯದ ಬಾಟಲಿಗಳಿಂದ ಬಟ್ಟೆಯನ್ನು ತಯಾರಿಸುವ ಪ್ರಕ್ರಿಯೆಯು ತೊಳೆಯುವುದು, ಒಣಗಿಸುವುದು ಮತ್ತು ಸಂಗ್ರಹಿಸಿದ ಬಾಟಲಿಗಳನ್ನು ಸಣ್ಣ ತುಣುಕುಗಳಾಗಿ ಪುಡಿ ಮಾಡುವುದನ್ನು ಒಳಗೊಂಡಿರುತ್ತದೆ.