ನವದೆಹಲಿ, ಫೆ 08 (DaijiworldNews/SM): ಅದಾನಿ ಸಂಸ್ಥೆಯನ್ನು ತೆರೆ ಮರೆಯಿಂದ ಕೇಂದ್ರ ಸರಕಾರ ರಕ್ಷಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬುಧವಾರ ಪುನರುಚ್ಚರಿಸಿದ್ದಾರೆ.
ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತಾ ನಿರ್ಣಯದ ಹಿಂದಿನ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರ ಉತ್ತರದಿಂದ ತಾವು ತೃಪ್ತರಾಗಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ, 'ಪ್ರಧಾನಿ ಭಾಷಣದಿಂದ ನನಗೆ ತೃಪ್ತಿ ಇಲ್ಲ. ಆದರೆ, ಅದು ಸತ್ಯವನ್ನು ಬಹಿರಂಗಪಡಿಸಿದ್ದು, ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ರಕ್ಷಿಸುತ್ತಿದೆ' ಎಂದು ಹೇಳಿದರು.