ನವದೆಹಲಿ, ಫೆ 09 (DaijiworldNews/DB): ಎನ್ಎಸ್ಇ ಉದ್ಯೋಗಿಗಳ ಅಕ್ರಮ ಫೋನ್ ಟ್ಯಾಪಿಂಗ್ ಆರೋಪ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎನ್ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಹೈಕೋರ್ಟ್ನಿಂದ ಗುರುವಾರ ಜಾಮೀನು ಮಂಜೂರಾಗಿದೆ.
ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರು ಜಾಮೀನು ನೀಡಿ ಆದೇಶಿಸಿದ್ದಾರೆ. ತಮ್ಮ ವಿರುದ್ದ ಮಾಡಲಾಗಿರುವ ಆರೋಪಗಳು ಮನಿ ಲಾಂಡರಿಂಗ್ ತಡೆ ಕಾಯ್ದೆಯ ಅಡಿಯಲ್ಲಿ ಬರುವುದಿಲ್ಲ ಎಂಬುದಾಗಿ ಚಿತ್ರಾ ವಾದಿಸಿದ್ದರು.
ಸಿಬಿಐ ತನಿಖೆ ನಡೆಸುತ್ತಿರುವ ಸಹ ಸ್ಥಳ ಹಗರಣ ಪ್ರಕರಣದಲ್ಲಿ ಕಳೆದ ಸೆಪ್ಟೆಂಬರ್ನಲ್ಲಿ ಚಿತ್ರಾ ರಾಮಕೃಷ್ಣ ಮತ್ತು ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಅವರಿಗೆ ಜಾಮೀನು ನೀಡಲಾಗಿತ್ತು.